ನನ್ನೊಂದಿಗೆ ಚರ್ಚಿಸಿಯೇ SSLC ಪರೀಕ್ಷೆ ಬಗ್ಗೆ ತೀರ್ಮಾನ : ಯಡಿಯೂರಪ್ಪ

ಬೆಂಗಳೂರು, (ಜೂ.29)- ಶಿಕ್ಷಣ ಸಚಿವವಾದ ಸುರೇಶ್‍ಕುಮಾರ್ ಅವರು ನನ್ನೊಂದಿಗೆ ಚರ್ಚಿಸಿದ ನಂತರವೇ ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ದಿನಾಂಕ ನಿಗದಿಪಡಿಸುವ ತೀರ್ಮಾನ ಕೈಗೊಳ್ಳುತ್ತಾರೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ಈ ಬಗ್ಗೆ ಟ್ವಿಟ್ಟರ್‍ನಲ್ಲಿ ಪ್ರತಿಕ್ರಿಯಿಸಿರುವ ಅವರು, ಸಚಿವರಾದ ಸುರೇಶ್‍ಕುಮಾರ್ ಅವರು ಪರೀಕ್ಷೆ ಬಗ್ಗೆ ಸಮಗ್ರವಾಗಿ ಚರ್ಚಿಸಿದ ನಂತರವೇ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ತೀರ್ಮಾನ ತೆಗೆದುಕೊಳ್ಳಲಾಗಿದ್ದು, ಇದು ಏಕಪಕ್ಷೀಯ ತೀರ್ಮಾನವಲ್ಲ. ಈ ಬಗ್ಗೆ ಗೊಂದಲ ಸೃಷ್ಟಿಸುವುದು ಅನಗತ್ಯ ಎಂದು ಹೇಳಿದ್ದಾರೆ.

ಆರೋಗ್ಯ ಇಲಾಖೆ ಮತ್ತು ಮುಖ್ಯಮಂತ್ರಿಗಳ ಜತೆ ಚರ್ಚಿಸದೆ ಪರೀಕ್ಷಾ ದಿನಾಂಕ ಪ್ರಕಟಿಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.ಈ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಿರುವ ಸಿಎಂ, ಇದು ಏಕಪಕ್ಷೀಯ ತೀರ್ಮಾನವಲ್ಲ. ನನ್ನೊಂದಿಗೆ ಚರ್ಚಿಸಿಯೇ ಅವರು ಪರೀಕ್ಷಾ ದಿನಾಂಕದ ನಿರ್ಧಾರ ಪ್ರಕಟಿಸಿದ್ದಾರೆ. ಯಾವುದೇ ರೀತಿಯ ಗೊಂದಲ ಬೇಡ ಎಂದು ಸ್ಪಷ್ಟಪಡಿಸಿದ್ದಾರೆ.

Leave a Comment

Your email address will not be published.