ರಾಜ್ಯ

ಯತ್ನಾಳ್-ಯೊಗೇಶ್ವರ್ ರಹಸ್ಯ ಭೇಟಿ!

ವಿಜಯಪುರ: ಆಡಳಿತಾರೂಢ ರಾಜ್ಯ ಬಿಜೆಪಿಯಲ್ಲಿ ಮತ್ತೆ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಇತ್ತೀಚೆಗಷ್ಟೇ ರಾಜ್ಯ ಬಿಜೆಪಿ ಉಸ್ತುವಾರಿ ನಾಯಕ ಅರುಣ್​ ಸಿಂಗ್​ ಬೆಂಗಳೂರಿಗೆ ಬಂದು ಪಕ್ಷದಲ್ಲಿ ಬಂಡಾಯಕ್ಕೆ ಮುಲಾಮು ಹಚ್ಚಲು ಯತ್ನಿಸಿದ್ದರು. ರಾಜ್ಯದಲ್ಲಿ ನಾಯಕತ್ವ ಬದಲಾಣೆಯಿಲ್ಲ ಎಂದು ಘಂಟಾಘೋಷವಾಗಿ ಹೇಳಿದ್ದರು. ಆದರೆ ಬಂಡಾಯ/ ಅತೃಪ್ತಿಗಳು ಇನ್ನೂ ರಾಜ್ಯ ಬಿಜೆಪಿಯಲ್ಲಿ ಮನೆಮಾಡಿದೆ ಎನ್ನಲು ಕೆಲ ದಿಢೀರ್ ಬೆಳವಣಿಗೆಗಳು ಕಂಡು ಬಂದಿವೆ. ಅತ್ತ ರಾಜಧಾನಿ ಬೆಂಗಳೂರಿಗೆ ಬಂದಿದ್ದ ಶಾಸಕ ರಮೇಶ್ ಜಾರಕಿಹೊಳಿ ಇದ್ದಕ್ಕಿದ್ದಂತೆ ದೆಹಲಿಗೆ ಹಾರಿದ್ದಾರೆ. ರಮೇಶ್ ಮುಂಬೈ ಪ್ಲ್ಯಾನ್‌ ಚೇಂಜ್‌ …

ಯತ್ನಾಳ್-ಯೊಗೇಶ್ವರ್ ರಹಸ್ಯ ಭೇಟಿ! Read More »

ಯಡಿಯೂರಪ್ಪನವರ ವಿರುದ್ಧ ಕಾರ್ಯತಂತ್ರ ಹೆಣೆಯುವ ಕೆಲಸ ನಾನು ಎಂದಿಗೂ ಮಾಡುವುದಿಲ್ಲ – ಸಿಪಿ ಯೊಗೇಶ್ವರ್

ಅಂಜನಾದ್ರಿ ಬೆಟ್ಟ(ಕೊಪ್ಪಳ): ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ ವಿರುದ್ಧ ಕಾರ್ಯತಂತ್ರ ಹೆಣೆಯುವ ಕೆಲಸ ನಾನು ಎಂದಿಗೂ ಮಾಡುವುದಿಲ್ಲ ಎಂದು ಪ್ರವಾಸೋದ್ಯಮ ಇಲಾಖೆ ಸಚಿವ ಸಿ ಪಿ ಯೋಗೇಶ್ವರ್ ಪುನರುಚ್ಛರಿಸಿದ್ದಾರೆ. ಅವರು ಇಂದು ಬೆಳಗ್ಗೆ ಕುಟುಂಬ ಸಮೇತ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಆನೆಗೊಂದಿಯ ಪ್ರಸಿದ್ಧ ಅಂಜನಾದ್ರಿ ಬೆಟ್ಟಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಬಳಿಕ ಹೊರಬಂದ ಅವರನ್ನು ಸುದ್ದಿಗಾರರು ಮಾತನಾಡಿಸಿ ನಾಯಕತ್ವ ಬದಲಾವಣೆ ಬಗ್ಗೆ ಕೇಳಿದಾಗ, ಯಡಿಯೂರಪ್ಪನವರನ್ನು ಮುಖ್ಯಮಂತ್ರಿ ಹುದ್ದೆಯಿಂದ ಪದಚ್ಯುತಿಗೊಳಿಸುವ ಕೆಲಸವನ್ನು ನಾವೆಂದಿಗೂ ಮಾಡಿಲ್ಲ, …

ಯಡಿಯೂರಪ್ಪನವರ ವಿರುದ್ಧ ಕಾರ್ಯತಂತ್ರ ಹೆಣೆಯುವ ಕೆಲಸ ನಾನು ಎಂದಿಗೂ ಮಾಡುವುದಿಲ್ಲ – ಸಿಪಿ ಯೊಗೇಶ್ವರ್ Read More »

ನನ್ನೊಂದಿಗೆ ಚರ್ಚಿಸಿಯೇ SSLC ಪರೀಕ್ಷೆ ಬಗ್ಗೆ ತೀರ್ಮಾನ : ಯಡಿಯೂರಪ್ಪ

ಬೆಂಗಳೂರು, (ಜೂ.29)- ಶಿಕ್ಷಣ ಸಚಿವವಾದ ಸುರೇಶ್‍ಕುಮಾರ್ ಅವರು ನನ್ನೊಂದಿಗೆ ಚರ್ಚಿಸಿದ ನಂತರವೇ ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ದಿನಾಂಕ ನಿಗದಿಪಡಿಸುವ ತೀರ್ಮಾನ ಕೈಗೊಳ್ಳುತ್ತಾರೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಟ್ವಿಟ್ಟರ್‍ನಲ್ಲಿ ಪ್ರತಿಕ್ರಿಯಿಸಿರುವ ಅವರು, ಸಚಿವರಾದ ಸುರೇಶ್‍ಕುಮಾರ್ ಅವರು ಪರೀಕ್ಷೆ ಬಗ್ಗೆ ಸಮಗ್ರವಾಗಿ ಚರ್ಚಿಸಿದ ನಂತರವೇ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ತೀರ್ಮಾನ ತೆಗೆದುಕೊಳ್ಳಲಾಗಿದ್ದು, ಇದು ಏಕಪಕ್ಷೀಯ ತೀರ್ಮಾನವಲ್ಲ. ಈ ಬಗ್ಗೆ ಗೊಂದಲ ಸೃಷ್ಟಿಸುವುದು ಅನಗತ್ಯ ಎಂದು ಹೇಳಿದ್ದಾರೆ. ಆರೋಗ್ಯ ಇಲಾಖೆ ಮತ್ತು ಮುಖ್ಯಮಂತ್ರಿಗಳ ಜತೆ ಚರ್ಚಿಸದೆ ಪರೀಕ್ಷಾ ದಿನಾಂಕ ಪ್ರಕಟಿಸಿದ್ದಾರೆ …

ನನ್ನೊಂದಿಗೆ ಚರ್ಚಿಸಿಯೇ SSLC ಪರೀಕ್ಷೆ ಬಗ್ಗೆ ತೀರ್ಮಾನ : ಯಡಿಯೂರಪ್ಪ Read More »